ಪ್ರಮುಖ ಸುದ್ದಿ
ಪ್ರವಾಸಿ ಗೈಡ್ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಸ್ಥಳೀಯ ಪ್ರವಾಸಿ ಸಂಪನ್ಮೂಲಗಳ ಬಗ್ಗೆ ಜ್ಞಾನ ಮತ್ತು ಅನುಭವವಿರುವ ಪ್ರವಾಸಿ ಮಾರ್ಗದರ್ಶಿಗಳ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ:
ಈ ಹುದ್ದೆಗೆ ಅಜಿ ಸಲ್ಲಿಸಲು ಬಯಸುವವರು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು 21 ರಿಂದ 45 ವರ್ಷಗಳು ಎಂದು ನಿಗದಿ ಪಡಿಸಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಪ್ರವಾಸೋದ್ಯಮ ಇಲಾಖೆ, ‘ಎ’ ಬ್ಲಾಕ್ 3ನೇ ತಿರುವು, ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿ ಸಲ್ಲಿಸಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-251444/ 7019740132 ಮೂಲಕ ಸಂಪರ್ಕಿಸುವುದು.
ಅಜಿ ಸಲ್ಲಿಸಲು ಕೊನೆಯ ದಿನಾಂಕ;
ಜುಲೈ 25, 2024