ಪ್ರಮುಖ ಸುದ್ದಿ

ದರ್ಶನ್ ಅಭಿಮಾನಿಗಳಿಂದ ನಟ ಪ್ರಥಮ್‌ಗೆ ಬೆದರಿಕೆ ಕರೆ – ದೂರು ದಾಖಲು

ಬೆಂಗಳೂರು : ನಟ ದರ್ಶನ್‌ ಅಭಿಮಾನಿಗಳಿಂದ ತನಗೆ ಜೀವ ಬೆದರಿಕೆ ಬಂದಿದೆ ಎಂದು ನಟ ಪ್ರಥಮ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ನಟ ದರ್ಶನ್‌ ಅಭಿಮಾನಿಗಳಿಂದ ತಮಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ನಟ ಪ್ರಥಮ್‌ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಥಮ್‌, ಜೀವನ ಬಹಳ ದೊಡ್ಡದು, ಯಾರಿಗೋಸ್ಕರವೋ ನೀವು ಅದನ್ನ ಹಾಳು ಮಾಡಿಕೊಳ್ಳಬೇಡಿ, ನಾನು ತುಂಬಾ ಶಾಂತಿಯಿಂದಲೇ ಇದ್ದೆ, ನೀವು ಅತಿಯಾಗಿ ನಮ್ಮ #ಕರ್ನಾಟಕದ_ಅಳಿಯ ತಂಡದ office no ಗೆ ಕಾಲ್ ಮಾಡಿ ಬೆದರಿಕೆ ಹಾಕುತ್ತಲೆ ಬಂದಿದ್ದೀರಾ, ಇನ್ಮೇಲೆ ನನಗೆ ಬರೋ ಕಾಲ್ msg ಅಥವಾ social media warning ಎಲ್ಲವೂ ಪೋಲೀಸರು ನೋಡಿಕೊಳ್ತಾರೆ, ಬದುಕು ಸುಂದರವಾದದ್ದು ಎಂದಿದ್ದಾರೆ. ಅಂಧಾಭಿಮಾನಿಗಳೇ, ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ, ಯಾರಿಗೋಸ್ಕರವೋ ಹಾಳು ಮಾಡಿಕೊಳ್ಳಬೇಡಿ, ಕನ್ನಡಕ್ಕಾಗಿ, ಕಾವೇರಿಗಾಗಿ, ಸಂಸ್ಕೃತಿ ಉಳಿಸೋಕೆ ಬೇಕಾದ್ರೆ ಜೈಲಿಗೆ ಹೋಗಿ…; ಯಾರಿಗೋಸ್ಕರವೋ ಲೈಫ್ ಹಾಳು ಮಾಡಿಕೊಳ್ಳಬೇಡಿ ಎಂದು ಪೋಸ್ಟ್‌ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button