Homeಪ್ರಮುಖ ಸುದ್ದಿ
ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ ಭಾರೀ ಮಳೆ ಸಾಧ್ಯತೆ : ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.
ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಆರೆಂಜ್ ಅಲರ್ಟ್ ಗುಡುಗು ಸಹಿತ ಭಾರೀ ಮಳೆಯೊಂದಿಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.