Homeಜನಮನಪ್ರಮುಖ ಸುದ್ದಿವಿನಯ ವಿಶೇಷಸಂಸ್ಕೃತಿ

ಉದ್ಯೋಗದಲ್ಲಿ ಕಡ್ಡಾಯವಾಗಿ ಕನ್ನಡಿಗರಿಗೆ ಶೇ.80ರಷ್ಟು ಮೀಸಲಾತಿ ನೀಡಬೇಕು: ಕನ್ನಡ ಪರ ಸಂಘಟನೆಗಳ ಎಚ್ಚರಿಕೆ

ಬೆಂಗಳೂರು: ರಾಜ್ಯ ಸರ್ಕಾರ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಸೋಮವಾರ ಪ್ರತಿಭಟನೆ ನಡೆಸಿದವು.

ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಪ್ರತಿಭಟನಾ ಮೆರವಣಿಗೆಯಲ್ಲಿ ಕಾರ್ಯಕರ್ತರು ಸೇರಿದಂತೆ ಸಾವಿರಾರು ಜನರು-ಕಾರ್ಯಕರ್ತರು ಪಾಲ್ಗೊಂಡಿದ್ದರು. ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ನಾರಾಯಣಗೌಡ ಪೊಲೀಸರು ತಮ್ಮನ್ನು ತಡೆಯಲು ಮುಂದಾದರೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತದೆ ಎಂದು ಎಚ್ಚರಿಸಿದರು. ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದೇವೆ. ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಲು ಹಾಗೂ ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ ನೀಡಿದ್ದೇವೆ. ಒಂದು ವೇಳೆ ಅನುಷ್ಠಾನಗೊಳಿಸಲು ವಿಫಲವಾದರೆ ನಮ್ಮ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಲಿದೆ ಎಂದು ಎಚ್ಚರಿಸಿದರು. ಅಂತೆಯೇ ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಸಮಯಾವಕಾಶ ಕೋರಿದ್ದೇವೆ ಎಂದು ಅವರು ತಿಳಿಸಿದರು.

ಇನ್ನು ಈ ಪ್ರತಿಭಟನಾ ಮೆರವಣಿಗೆಯಲ್ಲಿ ಕನ್ನಡ ಚಿತ್ರರಂಗದ ಖ್ಯಾತನಾಮರು ಪಾಲ್ಗೊಂಡಿದ್ದರು. ಪ್ರೇಮ್, ಪೂಜಾ ಗಾಂಧಿ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ನಟರು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು. ಯಾದಗಿರಿ, ಚಿತ್ರದುರ್ಗ, ಹಾವೇರಿ, ಧಾರವಾಡ, ಬೆಳಗಾವಿ ಮತ್ತಿತರ ಕಡೆ ಇದೇ ರೀತಿಯ ಪ್ರತಿಭಟನೆಗಳು ನಡೆಯುತ್ತಿವೆ.

ಬೇಡಿಕೆಗಳೇನು?

ಖಾಸಗಿ ವಲಯದಲ್ಲಿ ಕಡಿಮೆ ವರ್ಗದ ಉದ್ಯೋಗಗಳಿಗೆ 100 ಪ್ರತಿಶತ ಉದ್ಯೋಗ ಮೀಸಲಾತಿ ನೀಡಬೇಕು. ಈ ನಿಯಮಗಳನ್ನು ಪಾಲಿಸದ ಕಂಪನಿಗಳ ಪರವಾನಗಿಯನ್ನು ರದ್ದುಪಡಿಸಬೇಕು ಮತ್ತು ಅವರಿಗೆ ನೀಡಲಾದ ಭೂಮಿ ಮತ್ತು ಇತರ ಸವಲತ್ತುಗಳನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ.

ಶಾಂತಿ ಕಾಪಾಡಿ ಎಂದ ಗೃಹ ಸಚಿವರು

ಇನ್ನು ಈ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಜಿ.ಪರಮೇಶ್ವರ್, ”ಅವರ ಪ್ರತಿಭಟನೆಯ ಮೇಲೆ ನಿಗಾ ಇಡಲಾಗಿದೆ. ಅವರ ಶಾಂತಿಯುತ ಪ್ರತಿಭಟನೆಯಿಂದ ನಮಗೆ ಯಾವುದೇ ಸಮಸ್ಯೆ ಇಲ್ಲ, ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು ಎಂದು ಅವರು ಎಚ್ಚರಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button