Homeಅಂಕಣಕ್ಯಾಂಪಸ್ ಕಲರವಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ

ಎಸ್.ಎಸ್.ಎಲ್.ಸಿ ಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ ತಿಂಗಳಿಗೆ 3,500 ಸ್ಕಾಲರ್ ಶಿಪ್

(KEF Scholarship) ಎಸ್.ಎಸ್.ಎಲ್.ಸಿ ಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ 2024-24 ನೇ ಸಾಲಿನ ಕೋಟಕ್ ಜೂನಿಯರ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಕೋಟಕ್ ಮಹೀಂದ್ರಾ ಗ್ರೂಪ್ ಕಂಪನೀಸ್ನಿಂದ ಶಿಕ್ಷಣ ಮತ್ತು ಜೀವನೋಪಾಯದ ಕುರಿತು ಸಿಎಸ್ ಆರ್ ಉಪಕ್ರಮದ ಅಡಿಯಲ್ಲಿ, ಕೋಟಕ್ ಎಜುಕೇಶನ್ ಫೌಂಡೇಶನ್ ಮುಂಬೈ ಮೆಟ್ರೋಪಾಲಿಟನ್ ಪ್ರದೇಶದೊಳಗಿನ 10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಈ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಅರ್ಹತೆ ಕುರಿತು ಈ ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಅರ್ಜಿದಾರರು ತಮ್ಮ 2024 ರ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ 85%ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು.
* 2024-25ರ ಶೈಕ್ಷಣಿಕ ವರ್ಷಕ್ಕಾಗಿ ಮುಂಬೈ ಮೆಟ್ರೋಪಾಲಿಟನ್ ರೀಜಿಯನ್ (ಎಂಎಂಆರ್) ನಲ್ಲಿ ಕಲೆ, ವಾಣಿಜ್ಯ ಅಥವಾ ವಿಜ್ಞಾನ ವಿಭಾಗಗಳಿಗಾಗಿ ಜೂನಿಯರ್ ಕಾಲೇಜು/ಶಾಲೆಗಳಲ್ಲಿ 11ನೇ ತರಗತಿಗೆ ಪ್ರವೇಶ ಪಡೆದಿರಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 3,20,000 ಅಥವಾ ಕಡಿಮೆ ಆಗಿರಬೇಕು.
* ವಿದ್ಯಾರ್ಥಿಗಳು ಮುಂಬೈ ಮೆಟ್ರೋಪಾಲಿಟನ್ ರೀಜಿಯನ್ (ಎಂಎಂಆರ್)ನೊಳಗೆ ವಾಸಿಸುವವರಾಗಿರಬೇಕು.

ಎಷ್ಟು ಸ್ಕಾಲರ್ ಶಿಪ್ ಲಭ್ಯ:
ತಿಂಗಳಿಗೆ 3,500

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/KJSP2 ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
15-07-2024

Related Articles

Leave a Reply

Your email address will not be published. Required fields are marked *

Back to top button