ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ಗೌರವಧನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧಾರ

(Increase Honorarium) ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿಯವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ ಎಂದು ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳಕರ್ ತಿಳಿಸಿದರು.
ಹೌದು, ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚಿಸಲಾಗಿದ್ದು, ಮುಖ್ಯಮಂತ್ರಿಯವರು ತಾತ್ವಿಕ ಒಪ್ಪಿಗೆ ನೀಡಿದ್ದಾರೆ.
ಒಂದು ಹೆಣ್ಣು ಮನೆ ಬೆಳಗುತ್ತಾಳೆ ಮತ್ತು ಸಮಾಜವನ್ನು ಬೆಳೆಸುತ್ತಾಳೆ. ಚುನಾವಣೆ, ಪಲ್ಸ್-ಪೆಂಲೀಯೋ, ಮನೆ ಸಮೀಕ್ಷೆ, ಮುಖ್ಯವಾಗಿ ಕೊರೊನಾ ಸಂದರ್ಭದಲ್ಲಿ ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಗಣನೀಯ ಸೇವೆ ನೀಡಿದ್ದಾರೆ. ಸಮಾಜದಲ್ಲಿ ಅತ್ಯಂತ ಪ್ರಮುಖ ಸೇವೆ ನೀಡುವ ಇಲಾಖೆ ನಮ್ಮದು ಎಂದರೆ ತಪ್ಪಾಗಲಾರದು ಎಂದು ಲಕ್ಷ್ಮಿ ಆರ್. ಹೆಬ್ಬಾಳಕರ್ ಹೇಳಿದರು.
ರಾಜ್ಯದಲ್ಲಿನ 7 ಸಾವಿರಕ್ಕೂ ಹೆಚ್ಚಿನ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು. ಈ ಮೂಲಕ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ನುರಿತರಿಂದ ಕೌಶಲ್ಯಾಭಿವೃದ್ಧಿ ತರಬೇತಿಗೆ ಆದ್ಯತೆ ನೀಡಲಾಗುತ್ತದೆ. ಇದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆ, ತೂಕ, ಆರೋಗ್ಯ ಮತ್ತು ಗುಣಮಟ್ಟ ಶಿಕ್ಷಣಕ್ಕೆ ಪೂರಕವಾಗುತ್ತದೆ ಎಂದು ತಿಳಿಸಿದರು.
ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಆಹಾರ ಸಾಮಗ್ರಿಗಳ ಗುಣಮಟ್ಟತೆ ಕಾಯ್ದುಕೊಳ್ಳಬೇಕು. ಆಹಾರ ಸಾಮಾಗ್ರಿಗಳು ಕಳವೆ ಇದ್ದಲ್ಲಿ ಅಥವಾ ಯಾವುದೇ ಲೋಪದೋಷ ಕಂಡುಬಂದಲ್ಲಿ ಗಮನಕ್ಕೆ ತರಬೇಕು. ಇಲ್ಲವಾದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪತ್ರ ಬರೆಯಬೇಕು ಎಂದು ತಿಳಿಸಿದರು.