ಪ್ರಮುಖ ಸುದ್ದಿ
ವೀಲ್ಚೇರ್ನಲ್ಲೇ ಬಂದು ಪ್ರಧಾನಿ ಭೇಟಿಯಾದ ದೇವೇಗೌಡ : ಹೆಚ್ಡಿಡಿ ನೀಡಿದ ಕಲಾಕೃತಿಗೆ ಮೋದಿ ಫಿದಾ
ನವದೆಹಲಿ : ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ,ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಭೇಟಿ ಮಾಡಿದ್ದಾರೆ. ಮೋದಿ ಭೇಟಿಗೆ ದೇವೇಗೌಡರು ವೀಲ್ಚೇರ್ನಲ್ಲಿ ಬಂದಿದ್ದು ವಿಶೇಷ. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೂಡ ಉಪಸ್ಥಿತರಿದ್ದರು. ಹೆಚ್ಡಿ ದೇವೇಗೌಡರು ನೀಡಿದ ಕಲಾಕೃತಿಗೆ ಮೋದಿ ಫಿದಾ ಆಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮೋದಿ, ದೇವೇಗೌಡರು ಭೇಟಿಯಾದದ್ದು ಗೌರವದ ಸಂಗತಿ. ವಿವಿಧ ವಿಷಯಗಳ ಬಗ್ಗೆ ಅವರ ಜಾಣ್ಮೆ ಮತ್ತು ದೃಷ್ಟಿಕೋನ ಆಳವಾಗಿದ್ದು, ಮೌಲ್ಯಯುತವಾದುದ್ದಾಗಿದೆ. ನನಗೆ ಕಲಾಕೃತಿಯೊಂದನ್ನು ಉಡುಗೊರೆಯಾಗಿ ನೀಡುವ ಮೂಲಕ ನನ್ನ ಇತ್ತೀಚಿನ ಕನ್ಯಾಕುಮಾರಿ ಭೇಟಿ ನೆನಪಿಸಿದ ಅವರಿಗೆ ಕೃತಜ್ಞನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.