ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ; ಯಾರು ಅರ್ಹರು? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ್ ಮಾಹಿತಿ

(borewell Subsidy:-) ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಹ ಅಭ್ಯರ್ಥಿಗಳಿಗೆ ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ವಿವಿಧ 8 ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನಿರುದ್ಯೋಗಿ, ರೈತರು ಹಾಗೂ ವಿದ್ಯಾರ್ಥಿಗಳಿಂದ ಹಿಡಿದು ಪ್ರತಿಯೊಬ್ಬರಿಗೂ ಸಹಾಯವಾಗುವಂತೆ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಹ್ವಾನಿಸಲಾಗಿರುವ ಯೋಜನೆಗಳ ವಿವರ ಇಲ್ಲಿದೆ.
ಯಾವ ಯಾವ ಯೋಜನೆಗಳಿಗೆ ಅರ್ಜಿ ಕರೆಯಲಾಗಿದೆ:
- ಗಂಗಾ ಕಲ್ಯಾಣ ಯೋಜನೆ
- ಸ್ವಾವಲಂಬಿ ಸಾರಥಿ ಯೋಜನೆ
- ಸ್ವಯಂ ಉದ್ಯೋಗ ಸಾಲ ಯೋಜನೆ
- ಹೊಲಿಗೆ ಯಂತ್ರ ವಿತರಣೆ ಯೋಜನೆ
- ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ
- ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ
- ಅರಿವು ಶೈಕ್ಷಣಿಕ ಸಾಲ ಯೋಜನೆ
- ದೇವರಾಜ್ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ
- ಗಂಗಾ ಕಲ್ಯಾಣ ಯೋಜನೆಯ ವಿವರಗಳು:
ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ರೈತರಿಗೆ ತಮ್ಮ ಜಮೀನಿನಲ್ಲಿ ನೀರಾವರಿ ಬೆಳೆಗಳನ್ನು ಬೆಳೆಯಲು ಸಹಾಯವಾಗುವಂತೆ ಬೋರ್ವೆಲ್ ಕೊರೆಸಿಕೊಳ್ಳಲು ಸಹಾಯಧನ ನೀಡಲು ಅರ್ಜಿ ಅಹ್ವಾನಿಸಲಾಗಿದೆ.ಈ ಒಂದು ಯೋಜನೆಯ ಅಡಿಯಲ್ಲಿ ವೈಯಕ್ತಿಕ ಕೊಳವೆಬಾವಿ ಕೋರೆಸಿಕೊಳ್ಳಲು 3.75 ಲಕ್ಷ ರೂ. ಯಿಂದ 4.75 ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುವುದು. ಈ ಯೋಜನೆಯ ಹಣವನ್ನು ಜಿಲ್ಲೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ವಿಂಗಡಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಕೋಲಾರ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಘಟಕ ವೆಚ್ಚ 4.75 ಲಕ್ಷ ರೂ. ನೀಡಲಾಗುವುದು. ಈ ಹಣದಲ್ಲಿ ವಿದ್ಯುತ್ ಸಂಪರ್ಕ ವೆಚ್ಚಕ್ಕೆ 75 ಸಾವಿರ ರೂ. ಯನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ನೀಡಲಾಗುವುದು.
ಈ ಮೇಲೆ ತಿಳಿಸಿರುವ ಜಿಲ್ಲೆಗಳ ರೈತರನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ರೈತರಿಗೆ ಘಟಕ ವೆಚ್ಚ 3.75 ಲಕ್ಷ ರೂ. ಹಣವನ್ನು ನೀಡುತ್ತಿದ್ದು, ಈ ಜಿಲ್ಲೆಯವರಿಗೂ ಕೂಡ ವಿದ್ಯುತ್ ಸಂಪರ್ಕ ವೆಚ್ಚಕ್ಕೆ 75,000 ರೂ. ಯನ್ನು ವಿದ್ಯುತ್ ಸರಬರಾಜು ಕಂಪನಿ ಗಳಿಗೆ ನೀಡಲಾಗುವುದು.
ಒಂದು ವೇಳೆ ಈ ಜಿಲ್ಲೆಯ ರೈತರಿಗೆ ಈ ಹಣದಲ್ಲಿ ಕೊಳವೆಬಾವಿ ಕರೆಸಿಕೊಳ್ಳಲು ಸಾಧ್ಯವಾಗದಿದ್ದಲ್ಲಿ ಹೆಚ್ಚಿನ 50 ಸಾವಿರ ಹಣವನ್ನು 1% ಬಡ್ಡಿ ದರದಲ್ಲಿ ಬ್ಯಾಂಕುಗಳಿಂದ ಸಾಲ ಮಂಜೂರು ಮಾಡಿಕೊಡಲಾಗುವುದು.
ಈ ಯೋಜನೆಗೆ ಅರ್ಜಿ ಸಲ್ಲಿಸಲು ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಯ ರೈತರು ಕನಿಷ್ಠ ಒಂದು ಎಕರೆ ಜಮೀನನ್ನು ಹೊಂದಿರಬೇಕು ಮತ್ತು ಇನ್ನುಳಿದ ಜಿಲ್ಲೆಯ ರೈತರು ಎರಡು ಎಕರೆ ಜಮೀನನ್ನು ಹೊಂದಿರಬೇಕು.
ಈ ಯೋಜನೆಗೆ ಅರ್ಹರಿರುವ ಎಲ್ಲಾ ರೈತರು ಆಗಸ್ಟ್ 31, 2024 ನೇ ತಾರೀಕಿನ ಒಳಗಾಗಿ ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಸೇವಾ ಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಬೇಕು.