ಕೃಷಿಭಾಗ್ಯ ಯೋಜನೆಯಡಿ 90% ಸಹಾಯಧನ ಪಡೆಯಲು ಅರ್ಜಿ ಆಹ್ವಾನ :ಈ ದಾಖಲೆಗಳು ಕಡ್ಡಾಯ

(Krishi Bhagya Scheme) ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ಕೃಷಿ ಚಟುವಟಿಕೆಯನ್ನು ಉತ್ತೇಜಿಸುವ ಸಲುವಾಗಿ ಸಬ್ಸಿಡಿ, ಸಹಾಯಧನ, ಸಾಲವನ್ನು ನೀಡುತ್ತಿದೆ. ಇದೀಗ ರೈತರಿಗೆ ಕೃಷಿ ಚಟುವಟಿಕೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲವು ಯೋಜನೆಗೆ 90% ಸಹಾಯಧನ ನೀಡುತ್ತಿದ್ದು, ಅರ್ಹ ರೈತರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಯಾವ ಯೋಜನೆಗೆ, ಬೇಕಾಗುವ ದಾಖಲೆಗಳು ಯಾವುದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಕೃಷಿ ಭಾಗ್ಯ ಯೋಜನೆಯಲ್ಲಿ ಬದು, ಕೃಷಿ ಹೊಂಡ, ಕೃಷಿಹೊಂಡದ ಸುತ್ತಲು ತಂತಿ ಬೇಲಿ ನಿರ್ಮಾಣ, ಕೃಷಿಹೊಂಡಕ್ಕೆ ಪಾಲೀಥಿನ್ ಹೊದಿಕೆ, ಪಂಪ್ಸೆಟ್ ಅಲ್ಲದೆ ಲಘು ನೀರಾವರಿ ಘಟಕವನ್ನು ಅನುಷ್ಠಾನ ಮಾಡಲು ಸಹಾಯಧನ ನೀಡಲಾಗುತ್ತಿದ್ದು, ಅರ್ಹರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಎಷ್ಟು ಸಹಾಯಧನ ಲಭ್ಯ:
ಸಾಮಾನ್ಯ ವರ್ಗದ ರೈತರಿಗಾಗಿ 80% ಹಾಗೂ ಪರಿಶಿಷ್ಟ ಜಾತಿ, ಪಂಗಡದ ರೈತರಿಗಾಗಿ 90% ಸಹಾಯಧನವನ್ನು ಈ ಯೋಜನೆಯಲ್ಲಿ ನೀಡಲಾಗುತ್ತದೆ.
ಹಾಗಾದರೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
- ಭರ್ತಿ ಮಾಡಿದ ಅರ್ಜಿ
- ಪಾಸ್ ಪೋರ್ಟ್ ಸೈಜ್ ಪೋಟೊ
- ಪಹಣಿ
- ಜಾತಿ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ
- ಎಲ್ಲಿ ಅರ್ಜಿ ಸಲ್ಲಿಸುವುದು?;
ಆಸಕ್ತ ಹಾಗೂ ಅರ್ಹ ರೈತರು ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಯನ್ನು ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.