Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಗಮನಿಸಿ : ರೇಷನ್ ಕಾರ್ಡ್ ಹೊಂದಿರುವವರಿಗೆ ಮುಖ್ಯ ಮಾಹಿತಿ

(Ration Card) ರೇಷನ್ ಕಾರ್ಡ್ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಲಾಭ ಪಡೆಯಲು ಬಹುಮುಖ್ಯವಾಗಿದೆ. ಅಲ್ಲದೆ ಉಚಿತ ಚಿಕಿತ್ಸೆ, ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಗಳು ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿದೆ. ಹೀಗಾಗಿ ಎಲ್ಲರೂ ರೇಷನ್ ಕಾರ್ಡ್ ಅನ್ನು ಹೊಂದಿರುತ್ತಾರೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಪಡೆಯಲು ರೇಷನ್ ಕಾರ್ಡ್ ಇರಬೇಕು. ಅಲ್ಲದೆ ರೇಷನ್ ಕಾರ್ಡ್ ಗೆ ಇ-ಕೆವೈಸಿ ಮಾಡಿಸಿರಬೇಕು. ಈ ಇ-ಕೆವೈಸಿ ಮಾಡಿಸಲು ಈ ತಿಂಗಳು ಕೊನೆಯ ದಿನವಾಗಿದೆ. ಇ-ಕೆವೈಸಿ ಮಾಡಿಸಲು ಯಾವುದೆಲ್ಲಾ ದಾಖಲೆಗಳು ಬೇಕು, ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಬೇಕಾಗುವ ದಾಖಲೆಗಳು ಯಾವುದು?:
- ಪಡಿತರ ಚೀಟಿಯ ಒರಿಜಿನಲ್ ಪ್ರತಿ
- ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಫೋಟೋಕಾಪಿ
- ಕುಟುಂಬದ ಯಜಮಾನನ ಆಧಾರ್ ಕಾರ್ಡ್ ನಕಲು ಪ್ರತಿ
- ಬ್ಯಾಂಕ್ ಪಾಸ್ ಬುಕ್ ನ ಫೋಟೋಕಾಪಿ
- ಕುಟುಂಬದ ಯಜಮಾನನ ಎರಡು ಪಾಸ್ ಪೋರ್ಟ್ ಅಳತೆಯ ಪೋಟೋ
- ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಹತ್ತಿರದ ನ್ಯಾಯ ಬೆಲೆ ಅಂಗಡಿಗೆ ಆಗಸ್ಟ್ 31 ರೊಳಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಕೊನೆಯ ದಿನಾಂಕದೊಳಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಿ.