Homeಅಂಕಣಜನಮನಮಹಿಳಾ ವಾಣಿ
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆ ತಿಂದರೆ ದೇಹಕ್ಕೆ ಎಷ್ಟೆಲ್ಲ ಪ್ರಯೋಜನಕಾರಿ ಗೊತ್ತಾ?

ತುಳಸಿಯಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್, ರಂಜಕ, ಕಬ್ಬಿಣ ಮತ್ತು ಪೊಟ್ಯಾಸಿಯಮ್ನಂತಹ ಖನಿಜಗಳು ಸಮೃದ್ಧವಾಗಿವೆ. ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ಸೇವನೆ ಮಾಡುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ.
ಉಸಿರಾಟದ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಶೀತ, ಕೆಮ್ಮು, ಗಂಟಲು ನೋವಿನಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಮಲಬದ್ಧತೆಯಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ವಸಡುಗಳ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.