Homeಜನಮನಪ್ರಮುಖ ಸುದ್ದಿ

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಕೃಷಿ ಯಂತ್ರೋಪಕರಣಗಳಿಗೆ ಶೇ.90 ರಷ್ಟು ಸಹಾಯಧನ

(application) ಕೃಷಿ ಇಲಾಖೆ ವತಿಯಿಂದ ವಿವಿಧ ಘಟಕಗಳಿಗೆ ಅರ್ಜಿ ಆಹ್ವಾನಿಸಿದ್ದು, ಯಾವ ಘಟಕ, ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ, ತುಂತುರು ನೀರಾವರಿ ಘಟಕಗಳಿಗೆ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಎಷ್ಟು ಸಹಾಯಧನ ಲಭ್ಯ:
ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರವರೆಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90 ವರೆಗೆ ಸಹಾಯಧನ ನೀಡಲಾಗುತ್ತದೆ. ಹಾಗೆಯೇ ಸೂಕ್ಷ್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ಒದಗಿಸಲಾಗುತ್ತದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಹಾಗಾದರೆ ಅರ್ಜಿ ಸಲ್ಲಿಕೆ ಎಲ್ಲಿ?:
ಆಸಕ್ತ ಹಾಗೂ ಅರ್ಹ ರೈತರು ಅರ್ಜಿಗಳನ್ನು ಸಂಬಂಧಪಟ್ಟ ರೈತ ಕೇಂದ್ರಗಳಲ್ಲಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು. ರೈತರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತವಾದಲ್ಲಿ ನಿಯಮಾನುಸಾರ ಜೇಷ್ಠತೆ ಅನ್ವಯ ಅರ್ಜಿಗಳನ್ನು ಪರಿಗಣಿಸಲಾಗುತ್ತದೆ. ರೈತರು ಮೇಲ್ಕಂಡ ಯೋಜನೆಗಳ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಇನ್ನು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button