Homeಜನಮನಪ್ರಮುಖ ಸುದ್ದಿ

ವಾಹನ ಸವಾರರಿಗೆ ಗುಡ್​ನ್ಯೂಸ್: ಶೀಘ್ರವೇ ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಇಂಧನದ ದರದಿಂದ ವಾಹನ ಮಾಲಿಕರು ಕಂಗಾಲಾಗಿದ್ದಾರೆ. ಇದರಿಂದ ವಾಹಗಳನ್ನು ಹೊರ ತೆಗೆಯುವುದೇ ಬೇಡ ಎಂಬ ಮನಸ್ಥಿತಿಗೆ ತಲುಪಿದ್ದಾರೆ. ಆದ್ರೆ ಇದೀಗ ಕಂಗಲಾಗಿರುವ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ಸದ್ಯದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಲಿದೆಯಂತೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತಾರಾಷ್ಟ್ರೀಯ ಕಚ್ಚಾ ತೈಲದ ಬೆಲೆಯನ್ನು ಅವಲಂಬಿಸಿದೆ. ಆದರೆ ಕಳೆದ ಕೆಲವು ದಿನಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಪ್ರಮಾಣದಲ್ಲಿ ಕುಸಿಯುತ್ತಿದೆ. ಕೆಲವು ವಾರಗಳ ಹಿಂದೆ, ಒಂದು ಬ್ಯಾರಲ್ ತೈಲದ ಬೆಲೆ 80 ಡಾಲರ್‌ಗಿಂತ ಹೆಚ್ಚಿತ್ತು, ಪ್ರಸ್ತುತ ಕಚ್ಚಾ ತೈಲದ ಬೆಲೆ 70-72 ಡಾಲರ್‌ಗಳಿಗೆ ಇಳಿಕೆಯಾಗಿದೆ.

ಇದೇ ಪರಿಸ್ಥಿತಿ ಇನ್ನೂ ಕೆಲ ದಿನ ಮುಂದುವರಿದರೆ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಪೆಟ್ರೋಲಿಯಂ ಇಲಾಖೆಯ ಕಾರ್ಯದರ್ಶಿ ಪಂಕಜ್ ಜೈನ್ ತಿಳಿಸಿದ್ದಾರೆ. ಇದರೊಂದಿಗೆ ಸದ್ಯದಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಲು ಕೇಂದ್ರ ಚಿಂತನೆ ನಡೆಸಿದೆಯಂತೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡುವ ಸಾಧ್ಯತೆಯಿದೆ ಎಂದಿದ್ದಾರೆ. ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ 3 ವರ್ಷಗಳ ಕನಿಷ್ಠ ಮಟ್ಟಕ್ಕೆ ತಲುಪಿದೆ.

ಡಿಸೆಂಬರ್ 2021ರ ನಂತರ, ಮಂಗಳವಾರದಂದು ಬ್ಯಾರಲ್ ತೈಲದ ಬೆಲೆ 70 ಡಾಲರ್‌ಗಿಂತ ಕಡಿಮೆಯಾಗಿದೆ. ಜಾಗತಿಕ ಆರ್ಥಿಕತೆಯಲ್ಲಿ ಮುಂದುವರಿದ ನಿಧಾನಗತಿಯೇ ಇದಕ್ಕೆ ಕಾರಣ. ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ರೂ. 100ಕ್ಕೂ ಹೆಚ್ಚಿದೆ. ಇಂಧನ ಬೆಲೆ ಏರಿಳಿತದಿಂದ ಹಣದುಬ್ಬರ ಏರಿಕೆಯಾಗುತ್ತಿದೆ. ಕಚ್ಚಾ ತೈಲದ ಬೆಲೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸದ್ಯದಲ್ಲೇ ಕೇಂದ್ರವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 10 ರೂಪಾಯಿ ಕಡಿತಗೊಳಿಸಲಿದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ. ಇದು ವಾಹನ ಸಾವರರಲ್ಲಿ ನೆಮ್ಮದಿ ಮೂಡಿಸಿದೆ.

Related Articles

Leave a Reply

Your email address will not be published. Required fields are marked *

Back to top button