Homeಜನಮನಪ್ರಮುಖ ಸುದ್ದಿ

‘ರಾಜ್ಯದಲ್ಲಿ ಡ್ರಗ್ಸ್​ ಹಾವಳಿ ತಡೆಗಟ್ಟಲು ಟಾಸ್ಕ್​ ಫೋರ್ಸ್​ ರಚನೆ’- ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಶೇಕಡಾ 50ರಷ್ಟು ಪ್ರಕರಣಗಳು ಬೆಂಗಳೂರು ನಗರದಲ್ಲಿ ದಾಖಲಾಗಿವೆ.

ಮಂಗಳೂರಿನಲ್ಲಿ ಶೇ22 ರಷ್ಟು, ಬೇರೆ ಬೇರೆ ಜಿಲ್ಲೆಗಳಲ್ಲಿ‌ ಶೇ11 ರಷ್ಟು ಕೇಸ್​​ಗಳಿವೆ. ಡ್ರಗ್ಸ್​ ಹಾವಳಿ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚಿಸಲು ತೀರ್ಮಾನಿಸಿದ್ದೇವೆ. ಗೃಹ ಸಚಿವರು, ಆರೋಗ್ಯ, ವೈದ್ಯಕೀಯ, ನಗರಾಭಿವೃದ್ಧಿ, ಐಟಿಬಿಟಿ ಇಲಾಖೆ ಸಚಿವರುಗಳು‌ ಈ ಟಾಸ್ಕ್​ ಫೋರ್ಸ್​​ನ ಸದಸ್ಯರಾಗಿರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡ್ರಗ್ಸ್​ ಹಾವಳಿ ತಡೆಗಟ್ಟಲು ಗೃಹ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು, ಐಟಿಬಿಟಿ ಮತ್ತು ನಗರಾಭಿವೃದ್ಧಿ ಇಲಾಖೆ ಸಚಿವರು ಜೊತೆ‌ ಸಭೆ ನಡೆಸಿದೆ. ಸಭೆಯಲ್ಲಿ ಬೆಂಗಳೂರಿನ ಪೊಲೀಸ್ ಆಯುಕ್ತರು, ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು ಎಂದು ತಿಳಿಸಿದರು.

ಡ್ರಗ್ಸ್​ ತಡೆಗಟ್ಟಲು ಕಾನೂನಿನಲ್ಲಿ ತಿದ್ದುಪಡಿ ಅಥವಾ ಹೊಸ ಕಾನೂನು ಮಾಡುತ್ತೇವೆ. ಡ್ರಗ್ಸ್​ ಕೇಸ್​ನಲ್ಲಿ ಬಂಧನಕ್ಕೊಳಗಾದರೆ ಜಾಮೀನು ಸಿಗದಂತೆ ಮಾಡುತ್ತೇವೆ. ಡ್ರಗ್ಸ್​ ಸೇವನೆ ಮತ್ತು ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು‌ ಶಿಕ್ಷೆ ಆಗಲಿದೆ ಎಂದು ಹೇಳಿದರು.

ಬೆಂಗಳೂರು EAST ವಿಭಾಗದಲ್ಲಿ ಡ್ರಗ್ ಹಾವಳಿ ತೀವ್ರವಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದಕ್ಕೆ ಬಲಿ‌ ಹಾಕಲು ನಿರ್ಣಯ ಮಾಡಿದ್ದೇವೆ. ಒಡಿಶ್ಶಾ, ಆಂಧ್ರ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಿಂದ ಮಾದಕ ವಸ್ತು ರಾಜ್ಯಕ್ಕೆ supply ಆಗುತ್ತಿದೆ. ಇದನ್ನು ತಡೆಯಲು ಹೊಸ ಕಾರ್ಯತಂತ್ರ ರೂಪಿಸುತ್ತಿದ್ದೇವೆ ಎಂದರು.

Related Articles

Leave a Reply

Your email address will not be published. Required fields are marked *

Back to top button