Homeಅಂಕಣಜನಮನಪ್ರಮುಖ ಸುದ್ದಿ

ತಿರುಪತಿ ದೇವಾಲಯದ ಅವ್ಯವಹಾರಗಳ ತನಿಖೆಗೆ ವಿಶೇಷ ತಂಡ ರಚನೆ: ಎನ್.ಚಂದ್ರಬಾಬು ನಾಯ್ಡು

ಅಮರಾವತಿ: ವೈಎಸ್‍ಆರ್‌ಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ ದೇವಾಲಯದ ಅವ್ಯವಹಾರಗಳ ತನಿಖೆಗೆ ಸಿಎಂ ಎನ್.ಚಂದ್ರಬಾಬು ನಾಯ್ಡು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.

ಈ ಹಿಂದೆ ತಿರುಮಲ ತಿರುಪತಿ ದೇವಸ್ಥಾನಮ್ ಟ್ರಸ್ಟ್‌ನ ಮಾಜಿ ಅಧ್ಯಕ್ಷ ಭೂಮನ ಕರುಣಾಕರ್ ರೆಡ್ಡಿ ಮತ್ತು ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎವಿ ಧರ್ಮಾ ರೆಡ್ಡಿ ಕಳೆದ ಐದು ವರ್ಷಗಳಿಂದ ದೇವಾಲಯದ ನಿರ್ವಹಣೆಯಲ್ಲಿ ಹಲವಾರು ಅಕ್ರಮಗಳನ್ನು ಎಸಗಿದ್ದಾರೆ ಎಂದು ಆರೋಪಿಸಿತ್ತು.

ಈ ಎಲ್ಲಾ ಪ್ರಕರಣವನ್ನೂ ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೇ ಪ್ರಕರಣದ ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಟಿಡಿಪಿ ಹೇಳಿದೆ.

Related Articles

Leave a Reply

Your email address will not be published. Required fields are marked *

Back to top button