Homeಅಂಕಣಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಜೀರಿಗೆಯನ್ನು ನೀರಿನಲ್ಲಿ ನೆನೆಸಿ ಕುಡಿಯುವುದರಿಂದ ಆರೋಗ್ಯ ಪ್ರಯೋಜನಗಳು
ಜೀರಿಗೆಯನ್ನು ನೀರಿನಲ್ಲಿ ನೆನೆಸಿ ಕುಡಿಯುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಜೀರಿಗೆ ನೀರು ಜೀರ್ಣಕ್ರಿಯೆ ಸುಧಾರಿಸುತ್ತದೆ ಮತ್ತು ಹೊಟ್ಟೆಯ ಸಮಸ್ಯೆ ನಿವಾರಿಸುತ್ತದೆ.
ಇದರಲ್ಲಿ ಪೊಟ್ಯಾಸಿಯಮ್ ಮತ್ತು ಕಬ್ಬಿಣಾಂಶ ಹೇರಳವಾಗಿದ್ದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೀರಿಗೆ ನೀರು ಚಯಾಪಚಯವನ್ನು ಸುಧಾರಿಸುತ್ತದೆ ಮತ್ತು ತೂಕ ಇಳಿಸಲು ಸಹಾಯ ಮಾಡುತ್ತದೆ. ಜೀರಿಗೆ ನೀರಿನಲ್ಲಿ ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಮತ್ತು ವಿಟಮಿನ್ ಇ ಇರುವುದರಿಂದ ಚರ್ಮದ ಕಾಂತಿ ಹೆಚ್ಚುತ್ತದೆ.