ಮತ್ತೆ ಟಿಪ್ಪು ಜಯಂತಿಯ ಕಿಡಿ ಹೊತ್ತಿಸಿದ ಕೇಂದ್ರ ಸಚಿವ?
ಟಿಪ್ಪು ಜಯಂತಿ ಆಚರಣೆಯ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ನಮೂದಿಸದಿರಲು ಸಚಿವ ಹೆಗಡೆ ಸೂಚನೆ
ಕಾರವಾರಃ ಈ ಬಾರಿಯೂ ಸರ್ಕಾರದಿಂದ ನಡೆಯುವ ಟಿಪ್ಪು ಜಯಂತಿ ಆಚರಣೆ ಕಾರ್ಯಕ್ರಮ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರು ಹಾಕದಂತೆ ಕೇಂದ್ರ ಕೌಶಲ್ಯಾಭಿವವೃದ್ದಿ ಹಾಗೂ ಉಧ್ಯಮಶೀಲತೆ ಸಚಿವರಾದ ಅನಂತ್ ಕುಮಾರ್ ಹೆಗಡೆಯವರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಪತ್ರ ಬರೆದು ತಿಳಿಸಲಾಗಿದೆ.
ಮುಂದಿನ ತಿಂಗಳು ನಡೆಯುವ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಹೆಸರು ಹಾಕದಂತೆ ಸಚಿವರು ತಮ್ಮ
ಆಪ್ತ ಕಾರ್ಯದರ್ಶಿಗಳ ಮೂಲಕ ಪತ್ರ ರವಾನಿಸಿದ್ದಾರೆ.
ಸರ್ಕಾರ ನಡೆಸುವ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದ ಹಿನ್ನಲೆಯಲ್ಲಿ ಹೆಸರು ನಮೂದಿಸಂತೆ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಕಳೆದ ಬಾರಿಯೂ ಸಹ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಹೆಸರು ಹಾಕದಂತೆ ಪತ್ರ ಬರೆದಿದ್ದ ಅನಂತ್ ಕುಮಾರ್ ಹೆಗಡೆ ಅವರು, ಪ್ರಸ್ತುತ ಕೇಂದ್ರ ಸಚಿವರಿದ್ದು ಸಹ ಟಿಪ್ಪು ಜಯಂತಿ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಿರುವುದ ಸಾರ್ವಜನಿಕರಲ್ಲಿ ಆಶ್ಚರ್ಯ ಮೂಡಿಸಿದೆ.