ಪ್ರಮುಖ ಸುದ್ದಿ
ಶಿರಸಿ ಉದ್ವಿಘ್ನ: ಕಲ್ಲು ತೂರಾಟ, ಲಾಠಿ ಪ್ರಹಾರ, ಗಾಳಿಯಲ್ಲಿ ಗುಂಡು!
ಶಿರಸಿ: ಹಿಂದೂ ಕಾರ್ಯಕರ್ತ ಪರೇಶ ಮೆಸ್ತಾ ಸಾವಿನ ತನಿಖೆಗೆ ಆಗ್ರಹಿಸಿ ನಿಷೇಧಾಜ್ಞೆಯ ನಡುವೆ ಶಿರಸಿಯಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ. ಹೀಗಾಗಿ, ಪೊಲೀಸರು ಪ್ರತಿಭಟನೆಗೆ ಬ್ರೇಕ್ ಹಾಕಲು ಮುಂದಾದಾಗ ಪ್ರತಿಭಟನಾಕಾರರು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಆದರೆ, ಪೊಲೀಸರ ಲಾಠಿಗೆ ಬೆದರದ ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಕಲ್ಲು ತೂರಾಟ ನಡೆಸಿದ್ದಾರೆ.
ಪ್ರತಿಭಟನಾಕಾರರಿಂದ ಕಲ್ಲು ತೂರಾಟ ನಡೆದ ಪರಿಣಾಮ ಪೊಲೀಸರು, ಪತ್ರಕರ್ತರು ಹಾಗೂ ಇನ್ನಿತರರು ಗಾಯಗೊಂಡಿದ್ದಾರೆ. ಹೀಗಾಗಿ, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ನಾಲ್ಕು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.