ಪ್ರಮುಖ ಸುದ್ದಿ
ರೇಪ್ & ಮರ್ಡರ್ ಕೇಸ್ : ವಿವಿಧ ಸಂಘಟನೆಗಳಿಂದ ವಿಜಯಪುರ ಬಂದ್
ವಿಜಯಪುರ: ದಲಿತ ಸಮುದಾಯದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ ಕೃತ್ಯವನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ವಿಜಯಪುರ್ ಬಂದ್ ಗೆ ಕರೆ ನೀಡಿವೆ. ದಲಿತಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೆಳಗ್ಗೆಯಿಂದಲೇ ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ. ವಿವಿಧ ಸಂಘಟನೆಗಳ ಬಂದ್ ಕರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದ ಬಸ್ ನಿಲ್ದಾಣದ ಬಳಿ ಹಾಗೂ ವಿವಿಧ ವೃತ್ತಗಳಲ್ಲಿ ಪ್ರತಿಭಟನಾಕಾರರು ಜಮಾಯಿಸಿದ್ದಾರೆ. ಟೈರಿಗೆ ಬೆಂಕಿಯಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ವಿಜಯಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರ್ಕಾರಿ ಬಸ್ ಗಳು ಬೀದಿಗಿಳಿದಿಲ್ಲ. ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿವೆ. ಪ್ರತಿಭಟನೆ ಕಾವು ಹೆಚ್ಚಾದರೆ ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ ಮಾಡುವ ಬಗ್ಗೆ ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.