ಪ್ರಮುಖ ಸುದ್ದಿ
ವಿದ್ಯಾರ್ಥಿಗಳಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ನೀಡಿದ ಸಂದೇಶವೇನು?
ರಾಮನಗರ: ವಿದ್ಯಾರ್ಥಿಗಳಿಗೆ ಉದ್ಯೋಗ ಮಾಡುವುದಕ್ಕಿಂತ ಮುಖ್ಯವಾಗಿ ಉದ್ಯೋಗ ಸೃಷ್ಠಿಸುವ ಶಕ್ತಿಯಾಗುವ ಕನಸಿರಬೇಕು. ಜ್ಞಾನ ಎಂಬುದು ಕೇವಲ ಪುಸ್ತಕಕದ ಸ್ವತ್ತಾಗಿರದೆ ಜ್ಞಾನದಾಸೋಹವಾಗಿ ಸಮಾಜಕ್ಕೆ ಕೊಡುಗೆಯಾಗಬೇಕು. ರಾಷ್ಟ್ರ ಕಟ್ಟುವ ಕೆಲಸಕ್ಕೆ ವಿದ್ಯಾರ್ಥಿಗಳು ಕೈಜೋಡಿಸಬೇಕು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದರು.
ಬಿಡದಿ ಸಮೀಪದ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ 111ನೇ ವಾರ್ಷಿಕೋತ್ಸವ ಹಾಗೂ ಅಮೃತ ಇಂಜಿನಿಯರಿಂಗ್ ಕಾಲೇಜಿನ ಕ್ಯಾಂಪಸ್ಸನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟಿಸಿದರು. ರಾಜ್ಯಪಾಲ ವಜುಭಾಯಿವಾಲಾ, ಕೇಂದ್ರ ಸಚಿವ ಅನಂತಕುಮಾರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದ ರಾಷ್ಟ್ರಪತಿಗಳು ವಿದ್ಯಾರ್ಥಿಗಳು ಹಿತನುಡಿಗಳನ್ನು ಹೇಳಿದರು.