ಪ್ರಮುಖ ಸುದ್ದಿ

ಹಾಲಗೇರಾದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗಳ ಬಂಧನಕ್ಕೆ ದಸಂಸ ಆಗ್ರಹ

ಯಾದಗಿರಿಃ ತಾಲೂಕಿನ ಹಾಲಗೇರಾ ಗ್ರಾಮದ ಬಾಲಕಿ ಭಾಗಮ್ಮ(15) ಮೇಲೆ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಅವರು ಮುಗ್ಧ ಬಾಲಕಿ ಭಾಗ್ಯಮ್ಮ ಮೇಲೆ ಬಲತ್ಕಾರ ನಡೆದಿದೆ. ಪರಿಣಾಮ ಅವಮಾನ, ಮಾನಸಿಕ ಹಿಂಸೆ ತಾಳದೆ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಪೊಲೀಸರು ಸೂಕ್ತ ತನಿಖೆ ನಡೆಸಿ ಕೂಡಲೇ ಆರೋಪಿಗಳನ್ನು ಬಂಧಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಠಾಣೆಗೆ ದೂರು ಸಲ್ಲಿಸಲಾಗಿದೆ. ಆದರೂ ಪೊಲೀಸರು ಯಾವುದೇ ಕ್ರಮಕ್ಕೆ ಮುಂದಾಗದೆ ಮೌನವಹಿಸಿದ್ದಾರೆ ಎಂದು ದಸಂಸ ಮುಖಂಡರು ಆರೋಪಿಸಿದರು. ಈ ಸಂದರ್ಭದಲ್ಲಿ ಚಂದ್ರಶೇಖರ ಹಸನಾಪುರ, ಮುತ್ತುರಾಜ ದೇವತ್ಕಲ್, ಜಟ್ಟೆಪ್ಪ ನಾಗರಾಳ, ಮರಿಲಿಂಗಪ್ಪ ಹುಣಸಿಹೊಳೆ, ಮಲ್ಲಪ್ಪ ಅರಿಕೇರಿ, ಭೀಮಣ್ಣ ಕೊಂಗಂಡಿ, ಮಹೇಶ ಯಾದಿಗಿರಿ, ದೇವಿಂದ್ರ ನಾಟೇಕಾರ, ಅಜೀಜ್ ಐಕೂರ ಸೇರಿದಂತೆ ಇತರರಿದ್ದರು.

Related Articles

Leave a Reply

Your email address will not be published. Required fields are marked *

Back to top button