ಪ್ರಮುಖ ಸುದ್ದಿ
ಇಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣು!
ಯಾದಗಿರಿ: ಜಿಲ್ಲೆಯ ಸುರಪುರ ಪಟ್ಟಣದ ನಿಷ್ಠಿ ವಸತಿ ಗೃಹದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ನಡೆದಿದೆ. ನಾರಾಯಣಪುರ ಗ್ರಾಮದ ಅರುಣಕುಮಾರ್ (21) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸುರಪುರ ಪಟ್ಟಣದ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ತೃತೀಯ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ ಅರುಣ್ ಹಾಸ್ಟೆಲ್ ನ ಕೊಠಡಿಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸುರಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಅರುಣ್ ಆತ್ಮಹತ್ಯೆಗೆ ನಿಖರವಾದ ಕಾರಣವೇನೆಂಬುದು ಈವರೆಗೆ ತಿಳಿದು ಬಂದಿಲ್ಲ. ಪೊಲೀಸರ ತನಿಖೆಯಿಂದ ಅರುಣ್ ಸಾವಿಗೆ ಕಾರಣವೇನು ಎಂಬುದು ತಿಳಿದು ಬರಬೇಕಿದೆ.