ಪ್ರಮುಖ ಸುದ್ದಿ
SBI ಉದ್ಯೋಗಿ ಮಂಜುಳಾ ನೇಣಿಗೆ ಶರಣು
ಯಾದಗಿರಿ: ಎಸ್ ಬಿಐ ಬ್ಯಾಂಕ್ ಉದ್ಯೋಗಿ ಮಂಜುಳಾ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಾತಾ ಮಾಣಿಕೇಶ್ವರಿ ಬಡಾವಣೆಯಲ್ಲಿ ನಡೆದಿದೆ.
ನಗರದ ರೈಲ್ವೆ ನಿಲ್ದಾಣ ಹತ್ತಿರವಿರುವ ಎಸ್ ಬಿಐ ಬ್ಯಾಂಕ್ ನಲ್ಲಿ ಕ್ಲರ್ಕ್ ಕೆಲಸ ಮಾಡುತ್ತಿದ್ದ ಮಂಜುಳಾ, ರವಿವಾರ ಏಕಾ ಏಕಿ ಮನೆಯಲ್ಲಿ ನೇಣು ಬಿಗಿದುಕೊಳ್ಳಲು ಕಾರವೇನು ಎಂಬುದು ತಿಳಿದು ಬಂದಿಲ್ಲ. ಪೊಲೀಸರ ತನಿಖೆಯಿಂದಲೆ ಇದು ಬಹಿರಂಗಗೊಳ್ಳಬೇಕಿದೆ.
ಮೃತ ಯುವತಿ ಮೂಲತಃ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದಾಪುರ ಗ್ರಾಮದವರಾಗಿದ್ದಾರೆ.
ಸ್ಥಳಕ್ಕೆ ನಗರ ಠಾಣೆ ಪೊಲಿಸರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದು, ತೀವ್ರ ತನಿಖೆ ಕೈಗೊಂಡಿದ್ದಾರೆ.