ಪ್ರಮುಖ ಸುದ್ದಿ
ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿ, ಮೂವರು ಯುವಕರು ಸಾವು!
ಚಿಕ್ಕಮಗಳೂರು: ಕಡೂರು ತಾಲ್ಲೂಕಿನ ಮಲ್ಲೇಶ್ವರ ಗ್ರಾಮದ ಸಮೀಪ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಬೈಕಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ. ಮೃತರು ಕಡೂರು ತಾಲೂಕಿನ ಮುಗುಳಿಕಟ್ಟೆ ಗ್ರಾಮದ ನರಸಿಂಹಮೂರ್ತಿ(18) , ಬಾಸ್ಕರ (20) ಹಾಗೂ ಸಂತೋಷ ಎಂದು ಗುರುತಿಸಲಾಗಿದೆ.
ಕಡೂರು ಪಟ್ಟಣದಿಂದ ಮುಗುಳಿಕಟ್ಟೆಗೆ ಬೈಕಿನಲ್ಲಿ ಹಿಂದಿರುಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಒಂದೇ ಗ್ರಾಮದ ಮೂವರು ಯುವಕರು ಸ್ಥಳದಲ್ಲೇ ಅಸುನೀಗಿದ್ದಾರೆ. ಯುವಕರು ಸಂಚಾರಿ ನಿಯಮ ಮೀರಿ ಬೈಕಿನಲ್ಲಿ ತ್ರಿಬಲ್ ರೈಡಿಂಗ್ ನಲ್ಲಿದ್ದರು. ಲಾರಿ ಚಾಲಕ ಸಹ ಅತಿಯಾದ ವೇಗದಲ್ಲಿದ್ದ ಎಂದು ತಿಳಿದು ಬಂದಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಕಡೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.