ಪ್ರಮುಖ ಸುದ್ದಿ
ಸೂಪರ್ ಸ್ಟಾರ್ ರಜನಿಕಾಂತ್ ವಿರುದ್ಧ ಭುಗಿಲೆದ್ದ ಆಕ್ರೋಶ
ಬೆಂಗಳೂರು : ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ನಟ ರಜನೀಕಾಂತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿನ ರೈತರಿಗೆ ಅನ್ಯಾಯವಾಗಿದೆ. ಹೀಗಾಗಿ, ತಮಿಳುನಾಡಿನ ಸರ್ಕಾರ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಬೇಕು ಎಂಬುದಾಗಿ ಟ್ವೀಟ್ ಮಾಡಿದ್ದಾರೆ. ಇದು ಕನ್ನಡಿಗರನ್ನು ಕೆರಳಿಸಿದ್ದು ರಜನಿ ರಾಜಕೀಯ ಲಾಭಕ್ಕಾಗಿ ನಾಡದ್ರೋಹಿ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಜನೀಕಾಂತ್ ಅವರ ಹೇಳಿಕೆಯನ್ನು ವಿವಿಧ ಕನ್ನಡಪರ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ರಜನೀಕಾಂತ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿವಿಧ ಕನ್ನಡ ಪರ ಸಂಘಟನೆಗಳು ನಟ ರಜನಿಕಾಂತ್ ವಿರುದ್ಧ ಕಿಡಿ ಕಾರಿದ್ದು ಪ್ರತಿಭಟನೆಗೆ ಮುಂದಾಗಿವೆ ಎಂದು ತಿಳಿದು ಬಂದಿದೆ.