ಪ್ರಮುಖ ಸುದ್ದಿ
ಶಾಸಕ, ರೈತ ನಾಯಕ ಕೆ.ಎಸ್. ಪುಟ್ಟಣ್ಣಯ್ಯ ವಿಧಿವಶ
ಮಂಡ್ಯಃ ಜಿಲ್ಲೆಯ ಮೇಲೂಕೋಟೆ ಕ್ಷೇತ್ರದ ಶಾಸಕ ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯ ಹೃದಯಘಾತದಿಂದ ನಿಧನ ಹೊಂದಿದರು.
ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣವೊಂದರಲ್ಲಿ ಕಬಡ್ಡಿ ಪಂದ್ಯಾವಳಿ ವೀಕ್ಷಿಸುತ್ತಿರುವಾಗ ಎದೆ ನೋವಿನಿಂದ ಕುಸಿದು ಬಿದ್ದ ಪರಿಣಾಮ ಕೂಡಲೇ ಶಾಸಕರನ್ನು ನಗರ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದರೆ ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂಧಿಸಿದೆ ಅವರು ಮೃತಪಟ್ಟಿದ್ದಾರೆ. ಪುಟ್ಟಣ್ಣಯ್ಯ ಅವರು ಸರ್ವೋದಯ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದರು, ರೈತಪರ ವಿಧಾನಸಭೆಯಲ್ಲಿ ಧ್ವನಿ ಎತ್ತುವ ಏಕೈಕ ಶಾಸಕ ಇವರಾಗಿದ್ದರು.