ಪ್ರಮುಖ ಸುದ್ದಿ
ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಮೂವರು ಸಾವು
ಬೀದರ್ : ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಕವಡಿಹಾಳ್ ಗ್ರಾಮದ ಸಮೀಪ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಭೀಕರ ಅಪಘಾತದಿಂದಾಗಿ ಕಾರು ಪಲ್ಟಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಮೃತರನ್ನು ಬಸವಕಲ್ಯಾಣ ಪಟ್ಟಣದ ಇಸ್ಮಾಯಿಲ್ (35), ಸುಭಾಷ್ (38) ಹಾಗೂ ಯಲ್ಲಪ್ಪ (35) ಎಂದು ಗುರುತಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಬಸವ ಕಲ್ಯಾಣ ಪಟ್ಟಣದ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು ಅಪಘಾತಕ್ಕೆ ನಿಖರವಾದ ಕಾರಣ ಏನೆಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.