ಪ್ರಮುಖ ಸುದ್ದಿ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಗೆ ದಾಖಲು
ದೆಹಲಿ : ಮಾಜಿ ಪ್ರಧಾನಿ , ಅಜಾತಶತೃ ಅಟಲ್ ಬಿಹಾರಿ ವಾಜಪೇಯಿ ವಯೋಸಹಜ ಅನಾರೋಗ್ಯದಿಂದಾಗಿ ನಗರದ AIMS ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯ ತಪಾಸಣೆ ನಡೆಸಿರುವ ವೈದ್ಯರು ಚಿಕಿತ್ಸೆಗಾಗಿ ಒಂದು ದಿನ ಆಸ್ಪತ್ರೆಯಲ್ಲಿ ದಾಖಲಾಗುವಂತೆ ತಿಳಿಸಿದ್ದಾರೆ. ಹೀಗಾಗಿ, ವಾಜಪೇಯಿ ಅವರು ಇಂದು ರಾತ್ರಿ ಆಸ್ಪತ್ರೆಯಲ್ಲೇ ಉಳಿಯಲಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಬಿಜೆಪಿ ರಾಷ್ಟ್ರೀಯ ಅದ್ಯಕ್ಷ ಅಮಿತ್ ಶಾ ಹಾಗೂ ಎಐಸಿಸಿ ಅದ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಇತರೆ ರಾಜಕೀಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ವಿಚಾರಿಸಿದ್ದಾರೆ.