ಪ್ರಮುಖ ಸುದ್ದಿ
ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ : ನಾಲ್ವರು ಭಾರತೀಯ ಸೈನಿಕರು ಹುತಾತ್ಮ!
ಸಾಂಬಾ: ನೆರೆ ದೇಶ ಪಾಕಿಸ್ತಾನ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದ್ದು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಪರಿಣಾಮ ಜಮ್ಮು-ಕಾಶ್ಮೀರದ ಸಾಂಬಾ ಬಳಿಯ ಚಾಂಬಿಯಾಲ್ ಸೆಕ್ಟರ್ ನಲ್ಲಿ ನಾಲ್ವರು ಭಾರತೀಯ ಸೈನಿಕರು ಹುತಾತ್ಮರಾದ ಘಟನೆ ವರದಿಯಾಗಿದೆ.
ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಏಕಾಏಕಿ ಗಡಿ ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ಆರಂಭಿಸಿದೆ. ಹೀಗಾಗಿ, ಓರ್ವ ಅಸಿಸ್ಟಂಟ್ ಕಮಾಂಡಂಟ್ ಮತ್ತು ಓರ್ವ ಸಬ್ ಇನ್ಸ್ಪೆಕ್ಟರ್ ಸೇರಿ ನಾಲ್ವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ ಎಂದು ತಿಳಿದು ಬಂದಿದೆ.