ಪ್ರಮುಖ ಸುದ್ದಿ
ಸಮ್ಮಿಶ್ರ ಸರ್ಕಾರದ ತಂಟೆಗೆ ಹೋಗ್ಬೇಡಿ ಅಂದ್ರಂತೆ ಅಮಿತ್ ಶಾ!
ಗುಜರಾತ್ : ಲೋಕಸಭೆ ಚುನಾವಣೆಗೂ ಮೊದಲೇ ಕರ್ನಾಟಕ ಸಮ್ಮಿಶ್ರ ಸರ್ಕಾರ ತಾನಾಗಿಯೇ ಪತನ ಆಗಲಿದೆ. ನೀವು ಸಮ್ಮಿಶ್ರ ಸರ್ಕಾರದ ತಂಟೆಗೆ ಹೋಗಬೇಡಿ. ಬದಲಾಗಿ ಮುಂಬರುವ ಲೋಕಸಭೆ ಚನಾವಣೆಯಲ್ಲಿ ರಾಜ್ಯದಿಂದ ಹೆಚ್ಚಿನ ಸಂಸದನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿ ಎಂದು ಬಿಜೆಪಿ ರಾಷ್ಟ್ರೀಯ ಅದ್ಯಕ್ಷ ಅಮಿತ್ ಶಾ ಅವರು ಬಿಜೆಪಿ ರಾಜ್ಯದ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ನಿನ್ನೆಯಷ್ಟೇ ಬಿ.ಎಸ್.ಯಡಿಯೂರಪ್ಪ ಅವರು ಗುಜರಾತಿನ ಅಹಮದಾಬಾದ್ ಗೆ ತೆರಳಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ನಡೆದಿದ್ದು ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಕೆಲಸಕ್ಕೆ ಕೈ ಹಾಕಬೇಡಿ ಎಂದು ಅಮಿತ್ ಶಾ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.