ಪ್ರಮುಖ ಸುದ್ದಿ
ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಖುರ್ಚಿ ಬಿಟ್ಟೆದ್ದರೆ ಕಳೆದುಕೊಳ್ಳುವ ಭೀತಿ!
ಚಿತ್ರದುರ್ಗ : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸುತ್ತಿ ಜನರ ಸಮಸ್ಯೆ ಕೇಳಲು ಹೋದರೆ ಸಿಎಂ ಖುರ್ಚಿಯೇ ಕಳೆದುಕೊಳ್ಳುವ ಭಯವಿದೆ. ಹೀಗಾಗಿ, ಖುರ್ಚಿ ಉಳಿಸಿಕೊಳ್ಳುವುದರಲ್ಲೇ ಹೆಚ್.ಡಿ.ಕೆ ಕಾಲಹರಣ ಮಾಡುತ್ತಿದ್ದಾರೆ. ಬಜೆಟ್ ವಿಚಾರದಲ್ಲೇ ಸಮ್ಮಿಶ್ರ ಸರ್ಕಾರದಲ್ಲಿ ದೊಡ್ಡ ಮಟ್ಟದ ಆಂತರಿಕ ಕಲಹ ಶುರುವಾಗಿದೆ. ಪರಿಣಾಮ ರಾಜ್ಯ ಸಮ್ಮಿಶ್ರ ಸರ್ಕಾರ ಅಭಿವೃದ್ಧಿ ವಿಚಾರದಲ್ಲಿ ನಿಶ್ಯಬ್ಧವಾಗಿದೆ ಎಂದು ನೆಲಗೇತನಹಟ್ಟಿ ಗ್ರಾಮದಲ್ಲಿ ಬಿಜೆಪಿ ಶಾಸಕ ಬಿ.ಶ್ರೀರಾಮುಲು ಹೇಳಿದ್ದಾರೆ.
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ನೆಲಗೇತನಹಟ್ಟಿ ಗ್ರಾಮದಲ್ಲಿ ಶಾಸಕ ಶ್ರೀರಾಮುಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸುತ್ತ ಸಮ್ಮಿಶ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ರೈತರ ಸಾಲಮನ್ನಾಕ್ಕೆ ಸಿಎಂ 15ದಿನದ ಕಾಲಾವಕಾಶ ಕೇಳಿದ್ದು ಈಗ ಮರೆತು ಕುಳಿತಂತಿದೆ. ಆದರೆ, ಸಾಲ ಮನ್ನಾ ಮಾಡುವವರೆಗೂ ನಾವು ಹೋರಾಟ ಮಾಡುತ್ತೇವೆ ಎಂದು ಶ್ರೀರಾಮುಲು ಹೇಳಿದ್ದಾರೆ.