ಪ್ರಮುಖ ಸುದ್ದಿ
ಗ್ರಾ.ಪಂ ಅದ್ಯಕ್ಷೆ ಮೇಲೆ ಕಂಪ್ಯೂಟರ್ ಆಪರೇಟರ್ ಅತ್ಯಾಚಾರಕ್ಕೆ ಯತ್ನ!?
ಮೈಸೂರು: ಗ್ರಾಮ ಪಂಚಾಯತಿ ಅಧ್ಯಕ್ಷೆ ಮೇಲೆ ಕಂಪ್ಯೂಟರ್ ಆಪರೇಟರ್ ಅತ್ಯಾಚಾರಕ್ಕೆ ಯತ್ನಿಸಿದ್ದಾರಂತೆ. ಕಂಪ್ಯೂಟರ್ ಆಪರೇಟರ್ ಸುರೇಶ್ ಎಂಬುವರ ವಿರುದ್ಧ ಅತ್ಯಾಚಾರ ಯತ್ನ ಆರೋಪ ಕೇಳಿಬಂದಿದೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ. ಹೀಗಾಗಿ,
ಕಂಪ್ಯೂಟರ್ ಅಪರೇಟರ್ ಸುರೇಶ್ ನಾಪತ್ತೆ ಆಗಿದ್ದು ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಶೌಚಾಲಯ ನಿರ್ಮಾಣ ಯೋಜನೆಯ ಬಿಲ್ ಗೆ ಸಹಿ ಪಡೆಯಲು ಅಧ್ಯಕ್ಷೆಯ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಮನೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿ ಸುರೇಶ ಅತ್ಯಾಚಾರಕ್ಕೆ ಯತ್ನಸಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.