ಪ್ರಮುಖ ಸುದ್ದಿ
ಪತ್ರಕರ್ತ ವಿಶ್ವೇಶ್ವರ ಭಟ್ಟರಿಗೆ ವಿಘ್ನ!?
ಕೊಪ್ಪಳ : ಗಂಗಾವತಿಯಲ್ಲಿ ಆಯೋಜಿಸಿರುವ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆಗೆ ಪತ್ರಕರ್ತ ವಿಶ್ವೇಶ್ವರ ಭಟ್ ರನ್ನು ಆಹ್ವಾನಿಸಿದ್ದಕ್ಕೆ ಪ್ರಗತಿ ಪರ ಸಂಘನೆಗಳ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಸಮ್ಮೇಳನ ಉದ್ಘಾಟನೆ ವೇಳೆ ಕಪ್ಪು ಬಟ್ಟೆ ಪ್ರದರ್ಶಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಸಂದರ್ಭದಲ್ಲಿ ವಿಶ್ವೇಶ್ವರ ಭಟ್ , ಗೌರಿ ಸಾವನ್ನು ಸಂಭ್ರಮಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿಕೃತಿಯನ್ನು ಹೊರ ಹಾಕಿದ್ದರು. ಅಷ್ಟೇ ಅಲ್ಲದೆ ಪತ್ರಿಕೆಯಲ್ಲಿ ಗೌರಿ ಲಂಕೇಶ ಅವರ ಬಗ್ಗೆ ಕೀಳಾಗಿ ಬರೆಯಲಾಗಿತ್ತು ಎಂದು ಪ್ರಗತಿಪರ ಕಾರ್ಯಕರ್ತರು ಆರೋಪಿಸಿದ್ದಾರೆ.
ಪ್ರತಿಭಟನೆಯ ಸುಳಿವು ಸಿಗುತ್ತಿದ್ದಂತೆಯೇ ಗಂಗಾವತಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ವಿವಿಧ ಪ್ರಗತಿಪರ ಸಂಘಟನೆಗಳ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದ್ದಾರೆ. ಸಾಹಿತ್ಯ ಸಮ್ಮೇಳನ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.