ಪ್ರಮುಖ ಸುದ್ದಿ
ಉತ್ತರ ಕರ್ನಾಟಕ ಬಂದ್ ಕರೆ ವಾಪಸ್ : ಸೋಮಶೇಖರ್
ಹಾವೇರಿ : ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಆಗಷ್ಟ 2 ರಂದು ಬಂದ್ ಕರೆ ನೀಡಲಾಗಿದನ್ನು ವಾಪಸ್ ಪಡೆಯಲಾಗಿದೆ ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅದ್ಯಕ್ಷ ಸೋಮಶೇಖರ ಕೋತಂಬರಿ ಹೇಳಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ತರ ಕರ್ನಾಟಕಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ನಾಳೆ ಕರೆ ನೀಡಿದ್ದ ಉತ್ತರ ಕರ್ನಾಟಕ ಬಂದ್ ವಾಪಸ್ ಪಡೆದಿದ್ದೇವೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ನಾಳೆ ಸಾಂಕೇತಿಕವಾಗಿ ಶಾಂತಿಯುತ ಚಳುವಳಿ ನಡೆಸುತ್ತೇವೆ. ಉತ್ತರ ಕರ್ನಾಟಕ ಭಾಗದ ಹದಿಮೂರು ಜಿಲ್ಲೆಗಳಲ್ಲಿ ಪ್ರತಿಭಟನೆ, ಧರಣಿ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು. ಆಯಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಲಾಗುವುದು. ಹೋರಾಟ ಸಮಿತಿ ಸದಸ್ಯರು, ಹಿರಿಯ ಪತ್ರಕರ್ತ ಪಾಟೀಲ್ ಪುಟ್ಟಪ್ಪ ಅವರು ಸೇರಿದಂತೆ ಹಲವರ ಅಭಿಪ್ರಾಯವೂ ಬಂದ್ ಬೇಡ ಎಂಬುದಾಗಿತ್ತು. ಹೀಗಾಗಿ, ಬಂದ್ ವಾಪಸ್ ಪಡೆದಿದ್ದೇವೆ ಎಂದು ಸೋಮಶೇಖರ್ ಅವರು ತಿಳಿಸಿದ್ದಾರೆ.