ಪ್ರಮುಖ ಸುದ್ದಿ
ಬೆಂಗಳೂರು: ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು..!

ಬೆಂಗಳೂರು: ಕಾರೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಮೆಟ್ರೋ ನಿಲ್ದಾಣದ ಸಮೀಪ ನಡೆದಿದೆ. ಚಾಲಕ ಒಬ್ಬನೇ ಕಿಯಾ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ. ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಕಾರಿನಿಂದ ಇಳಿದಿದ್ದಾನೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಕಾರು ಹೊತ್ತಿ ಉರಿಯುತ್ತಿರೋದನ್ನು ಕಂಡು ಸ್ಥಳೀಯರು ಆಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನ ನಂದಿಸಿದ್ದಾರೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.