ಪ್ರಮುಖ ಸುದ್ದಿ
ಕಲಬುರಗಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ!
ಬೆಂಗಳೂರು: ಸಣ್ಣ ನೀರಾವರಿ ಇಲಾಖೆ ಕಲಬುರಗಿ ವಿಭಾಗದಲ್ಲಿ ಇಇ ಆಗಿ ಕಾರ್ಯ ನಿಋವಹಿಸುತ್ತಿರುವ ಮಲ್ಲಪ್ಪ ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ದಾಳಿ ಅನಡೆಸಿದ್ದಾರೆ. ನಗರದ ಹನುಮಂತ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದು ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಎಸಿಬಿ ಮೂಲಗಳಿಂದ ತಿಳಿದು ಬಂದಿದೆ.
ಇಇ ಮಲ್ಲಪ್ಪ ಅವರು ಮೂಲತಃ ಶಿವಮೊಗ್ಗದವರಾಗಿದ್ದು ಸದ್ಯ ಕಲಬುರಗಿಯಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿದ್ದಾರೆ. ಬೆಂಗಳೂರು ಶಿವಮೊಗ್ಗ ಮನೆಗಳ ಮೇಲೆ ಎಸಿಬಿ ದಾಳಿ ನಡೆದಿದ್ದು ಕಲಬುರಗಿ ನಿವಾಸ ಹಾೂ ಕಚೇರಿ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.