ಪ್ರಮುಖ ಸುದ್ದಿ
ಬಳ್ಳಾರಿ ಉಪವಿಭಾಗಧಿಕಾರಿ ಕುಮಾರಸ್ವಾಮಿ ಮನೆ ಮೇಲೆ ACB ದಾಳಿ!
ಬಳ್ಳಾರಿ: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಉಪವಿಭಾಗಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರ ಕಚೇರಿ ಹಾಗೂ ಮನೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಎಸಿ ಕುಮಾರಸ್ವಾಮಿ ಅವರಿಗೆ ಶಾಕ್ ನೀಡಿರುವ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ಬಳ್ಳಾರಿ ಹಾಗೂ ಚಿತ್ರದುರ್ಗದ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಬಳ್ಳಾರಿಯಲ್ಲಿ ಎಸಿಬಿ ಎಸ್ಪಿ ವಂಶಿಕೃಷ್ಣ ನೇತೃತ್ವದ ತಂಡ, ಚಿತ್ರದುರ್ಗದಲ್ಲಿ ಡಿವೈಎಸ್ಪಿ ಜಿ.ಮಂಜುನಾಥ ನೇತೃತ್ವದ ತಂಡ ದಾಳಿ ನಡೆಸಿದ್ದು ಪರಿಶೀಲನೆ ನಡೆಸಲಾಗುತ್ತಿದೆ.
ಚಿತ್ರದುರ್ಗ ಸೇರಿದಂತೆ ಇತರೆ ತಾಲೂಕುಗಳಲ್ಲಿ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸಿದ್ದ ಕುಮಾರಸ್ವಾಮಿ ಇತ್ತೀಚೆಗಷ್ಟೇ ಬಳ್ಳಾರಿಯ ಉಪವಿಭಾಗಧಿಕಾರಿ ಆಗಿದ್ದರು. ಕುಮಾರಸ್ವಾಮಿ ವಿರುದ್ಧ ಆದಾಯ ಮೀರಿದ ಆಸ್ತಿ ಗಳಿಕೆ ಬಗ್ಗೆ ಎಸಿಬಿ ಅಧಿಕಾರಿಗಳಿಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.