ಪ್ರಮುಖ ಸುದ್ದಿ
ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದ ಪೊಲೀಸ್ ಪೇದೆ!
ಚಿತ್ರದುರ್ಗ : ಹೊಸದುರ್ಗ ಪೊಲೀಸ್ ಠಾಣೆಯ ಪೇದೆ ಅಶೋಕ್ ಅಕ್ರಮ ಮರಳು ಸಾಗಿಸುತ್ತಿದ್ದ ಲಾರಿಯನ್ನು ಬಿಡುಗಡೆಗೊಳಿಸಲು ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ. ಹೊಸದುರ್ಗ ನಗರದ ಪೊಲೀಸ್ ಠಾಣೆ ಎದುರು ಅತ್ತಿಗಟ್ಟ ಗ್ರಾಮದ ನರಸಿಂಹ ರಾಜು ಎಂಬುವರ ಬಳಿ 20ಸಾವಿರ ರೂಪಾಯಿ ಲಂಚದ ಹಣ ಸ್ವೀಕರಿಸುತ್ತಿರುವ ವೇಳೆ ಎಸಿಬಿ ಡಿವೈಎಸ್ಪಿ ಜಿ.ಮಂಜುನಾಥ್ ನೇತೃತ್ವದ ತಂಡ ದಾಳಿ ನಡೆಸಿದ್ದು ರೆಡ್ ಹ್ಯಾಂಡಾಗಿ ಪೇದೆಯನ್ನು ವಶಕ್ಕೆ ಪಡೆದಿದೆ. ಈ ಪ್ರಕರಣದಲ್ಲಿ ಪೊಲೀಸ್ ಪೇದೆ ಮಾತ್ರವಲ್ಲದೆ ಪೊಲೀಸ್ ಅಧಿಕಾರಿಗಳು ಸಹ ಶಾಮೀಲಾಗಿರುವ ಸಾಧ್ಯತೆ ಇದೆ. ಎಸಿಬಿ ಅಧಿಕಾರಿಗಳು ಪೇದೆ ಅಶೋಕನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.