ಪ್ರಮುಖ ಸುದ್ದಿ
ಭೀಕರ ಅಪಘಾತ : ದಂಪತಿ ಸ್ಥಳದಲ್ಲೇ ಸಾವು
ತುಮಕೂರು: ಕಾರು ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ದಂಪತಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಬಾಣವಾರ ಗೇಟ್ ಸಮೀಪ ನಡೆದಿದೆ. ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಗ್ರಾಮದ
ರಾಮೇಗೌಡ (55), ಪತ್ನಿ ಹೇಮಾ(50) ಮೃತರು ಎಂದು ಗುರುತಿಸಲಾಗಿದೆ. ಸಿ.ಎಸ್.ಪುರದಿಂದ ತುಮಕೂರು ನಗರಕ್ಕೆ ತೆರಳುವ ಸಂದರ್ಭದಲ್ಲಿ ದುರ್ಘಟನೆ ನಡೆದಿದೆ. ಹೆಬ್ಬೂರು ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆಯಿಂದಷ್ಟೇ ಅಪಘಾತಕ್ಕೆ ನಿಖರವಾದ ಕಾರಣ ಏನೆಂಬುದು ತಿಳಿದು ಬರಬೇಕಿದೆ.