ಪ್ರಮುಖ ಸುದ್ದಿ
ನೂರು ಅಡಿ ಆಳಕ್ಕೆ ಬಿದ್ದ ಲಾರಿ : ಡ್ರೈವರ್ & ಕ್ಲೀನರ್ ಬಚಾವಾಗಿದ್ದು ವಂಡರ್!
ದಕ್ಷಿಣ ಕನ್ನಡ : ಬೆಳ್ತಂಗಡಿ ತಾಲ್ಲೂಕಿನ ಚಾರ್ಮಾಡಿ ಘಾಟ್ ನ ಮೂರನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ನೂರು ಅಡಿ ಆಳಕ್ಕೆ ಬಿದ್ದಿದೆ. ಆದರೆ, ಲಾರಿ ಉರುಳುವ ಸಂದರ್ಭದಲ್ಲಿ ತಕ್ಷಣ ಎಚ್ಚೆತ್ತುಕೊಂಡ
ಚಾಲಕ ಮತ್ತು ಕ್ಲೀನರ್ ಇಬ್ಬರೂ ಲಾರಿಯಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಕ್ಷಣಾರ್ಧದಲ್ಲಿ ಪ್ರಾಣ ಉಳಿಸಿಕೊಂಡ ಚಾಲಕ ಹ್ಯಾರಿಸ್ ಮತ್ತು ಕ್ಲಿನರ್ ಮೊಹಮ್ಮದ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.