ಪ್ರಮುಖ ಸುದ್ದಿ
ಬೆಳಗಾವಿಯಲ್ಲಿ ಭೀಕರ ಅಪಘಾತ : ಇಬ್ಬರು ಯೋಧರು ಸಾವು
ಬೆಳಗಾವಿ : ಬೈಕಿಗೆ ಲಾರಿ ಡಿಕ್ಕಿಯಾದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಯೋಧರು ಸ್ಥಳದಲ್ಲೇ ಸಾವಿಗೀಡಾದ ದುರ್ಘಟನೆ ಬೈಲಹೊಂಗಲ ತಾಲೂಕಿನ ಬೆಳವಡಿ ಕ್ರಾಸ್ ಸಮೀಪ ನಡೆದಿದೆ. ಬೈಲಹೊಂಗಲ ತಾಲೂಕಿನ ಕೆ.ಬಿ.ಪಟ್ಟಿಹಾಳ ಗ್ರಾಮದ ಸಂಜು ಕರೆಪ್ಪನವರ (32), ದಿಲಾವರ ನದಾಪ್ (29) ಸಾವನ್ನಪ್ಪಿದ್ದಾರೆ.
ದೆಹಲಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯೋಧರು ಒಂದು ವಾರದ ಹಿಂದಷ್ಟೇ ರಜೆ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು. ಬೈಲಹೊಂಗಲ ಪೊಲೀಸ್ ಠಾಣಾಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆ ಬಳಿಕವಷ್ಟೇ ಅಪಘಾತಕ್ಕೆ ನಿಖರ ಕಾರಣ ಏನೆಂಬುದು ತಿಳಿದು ಬರಬೇಕಿದೆ.