ಪ್ರಮುಖ ಸುದ್ದಿ
ಭೀಕರ ಅಪಘಾತಕ್ಕೆ ಯುವ ಪತ್ರಕರ್ತ ಬಲಿ!
ದಾವಣಗೆರೆ : ಮಾಯಕೊಂಡ ತಾಲೂಕಿನ ಕೊಡಗನೂರು ಸಮೀಪ ಬೈಕಿಗೆ ಟ್ರ್ಯಾಕ್ಟರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ. ಪ್ರಜಾವಾಣಿ ಪತ್ರಿಕೆಯ ಹಾವೇರಿ ವರದಿಗಾರರಾಗಿದ್ದ ಎಂ.ಸಿ.ಮಂಜುನಾಥ್ (30) ಮೃತರು ಎಂದು ಗುರುತಿಸಲಾಗಿದೆ. ದಾವಣಗೆರೆಯಿಂದ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಕಡೆಗೆ ಬೈಕಿನಲ್ಲಿ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಶಿವಮೊಗ್ಗ ಮೂಲದ ಮಂಜುನಾಥ್ ಕಳೆದ ಐದು ತಿಂಗಳಿಂದ ಹಾವೇರಿ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಲ್ಪಾವಧಿಯಲ್ಲೇ ಉತ್ತಮ ಸೇವೆ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದರು ಎಂದು ತಿಳಿದು ಬಂದಿದೆ. ಮಾಯಾಕೊಂಡ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದ್ದು ಪೊಲೀಸರು ಅಪಘಾತಕ್ಕೆ ನಿಖರವಾದ ಕಾರಣವೇನೆಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.