Homeಜನಮನಪ್ರಮುಖ ಸುದ್ದಿ
ಗದಗ: ಸರ್ಕಾರಿ ಬಸ್- ಕಾರು ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

ಸರ್ಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16), ಮಗ ವಿಜಯ(12) ಮೃತ ದುರ್ದೈವಿಗಳು. ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನರಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. z