ಪ್ರಮುಖ ಸುದ್ದಿ
ಯಾದಗಿರಿ : ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಓರ್ವನ ಸಾವು, ಮೂವರಿಗೆ ಗಂಭೀರ ಗಾಯ
ಯಾದಗಿರಿ: ತಾಲೂಕಿನ ಚಿನ್ನಾಕಾರ್ ಗ್ರಾಮದ ಕ್ರಾಸ್ ಸಮೀಪ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಅರಕೇರಾ ತಾಂಡಾದ ನಿವಾಸಿ ದೇವು ನಾಯಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಇನ್ನುಳಿದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳು ಗುರುಮಿಠಕಲ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುಮಿಠಕಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.