ಪ್ರಮುಖ ಸುದ್ದಿ
ಬೈಕ್ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿ, ಮೂವರ ಸಾವು!
ಕಲಬುರಗಿ: ತಾಲೂಕಿನ ನಾವದಗಿ ಗ್ರಾಮದ ಸಮೀಪ ಟೆಂಪೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಬೈಕಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಚಿಂಚೋಳಿ ತಾಲೂಕಿನ ಬುಯಾರ ಗ್ರಾಮದ ಶರಣು (22), ಈರಣ್ಣ (23) ಹಾಗೂ ರವಿ ಕುಲಕರ್ಣಿ(30) ಎಂದು ಗುರುತಿಸಲಾಗಿದೆ.
ಕಳೆದ ರಾತ್ರಿ ಸಮಯ ದುರ್ಘಟನೆ ನಡೆದಿದೆ. ಕಲಬುರಗಿ ನಗರದಿಂದ ಬೈಕಿನಲ್ಲಿ ಗ್ರಾಮಕ್ಕೆ ಮರಳುತ್ತಿದ್ದಾಗ ಅಪಘಾತ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಕಮಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆ ಬಳಿಕವಷ್ಟೇ ಅಪಘಾತಕ್ಕೆ ನಿಖರವಾದ ಕಾರಣವೇನೆಂಬುದು ತಿಳಿದು ಬರಬೇಕಿದೆ.