ಪ್ರಮುಖ ಸುದ್ದಿ
ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ, ಸ್ಥಳದಲ್ಲೆ CRPF ಯೋಧ ದುರ್ಮರಣ
ಕಲಬುರಗಿಃ ಬೈಕ್ ಮತ್ತು ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಇಂಜಳ್ಳಿ ಕ್ರಾಸ್ ಹತ್ತಿರ ರವಿವಾರ ರಾತ್ರಿ ನಡೆದಿದೆ.
ಅಪಘಾತದಲ್ಲಿ ಸೇಡಂ ತಾಲೂಕಿನ ಕುರಕುಂಟಾ ಗ್ರಾಮದ ಯುವರಾಜ್ ಪಾಂಡೆ (38) ಸ್ಥಳದಲ್ಲೇ ಅಸುನೀಗಿದ್ದಾನೆ.
ಅಪಘಾತದ ನಂತರ ಟ್ರ್ಯಾಕ್ಟರ್ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ಸೇಡಂ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಯುವರಾಜ್ ಪಾಂಡೆ CRPF ಯೋಧನಾಗಿದ್ದು, ಕಳೆದ ಮೂರು ದಿನದ ಹಿಂದೆ ಗ್ರಾಮಕ್ಕೆ ರಜೆ ಮೇಲೆ ಬಂದಿದ್ದ ಎನ್ನಲಾಗಿದೆ.
ಜಮ್ಮುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವರಾಜ್ ನಾಳೆ ಮರಳಿ ಹೋಗವವರಿದ್ದರು. ಅಷ್ಟರಲ್ಲಿ ಈ ದುರ್ಘಟೆ ನಡೆದಿದೆ. ಕುಟುಂಬಸ್ಥರು ರೋದನ ಮುಗಿಲು ಮುಟ್ಟಿದೆ.