ಪ್ರಮುಖ ಸುದ್ದಿ
ಟೆಂಪೋ ಮತ್ತು ಬೈಕ್ ನಡುವೆ ಡಿಕ್ಕಿ ಸವಾರ ಸಾವು
ಕಾಸರಗೋಡುಃ ಟೆಂಪೊ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಸವಾರನೋರ್ವ ಮೃತಪಟ್ಟ ಘಟನೆ ಶನಿವಾರ ಸಂಜೆ ನಗರದ ಹೊರವಲಯದ ನಾಯಮ್ಮರ್ ಮೂಲೆ ಗ್ರಾಮದಲ್ಲಿ ನಡೆದಿದೆ. ಚೆರ್ಕಳದ ಬೇರ್ಕದ ನಿವಾಸಿ ಶಮ್ಮಾಸ್ (20) ಎಂಬಾತನೇ ಮೃತ ಸವಾರ ಎಂದು ಗುರುತಿಸಲಾಗಿದೆ.
ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಶಮ್ಮಾಸ್‌ನನ್ನು ಕೂಡಲೇ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಪೊಲೀಸ ಮೂಲಗಳಿಂದ ತಿಳಿದು ಬಂದಿದೆ. ಈ ಬಗ್ಗೆ ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.