ಪ್ರಮುಖ ಸುದ್ದಿ
ಭೀ.ಗುಡಿ ಬಳಿ ಅಪಘಾತ: ಓರ್ವ ವ್ಯಕ್ತಿ ಸಾವು
ಶಹಾಪುರ: ಭೀಮರಾಯನ ಗುಡಿಯಿಂದ ಶಖಾಪುರ ಗ್ರಾಮಕ್ಕೆ ತೆರಳುತ್ತಿರುವಾಗ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಶಖಾಪುರ ಗ್ರಾಮದ ಶಂಕರ್ ರಾಠೋಡ್ (38) ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ಮರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಭೀಮರಾಯನ ಗುಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಪಘಾತಕ್ಕೆ ನಿಖರವಾದ ಕಾರಣವೇನೆಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.