ಪ್ರಮುಖ ಸುದ್ದಿ
ರಾಣೇಬೆನ್ನೂರು ಶಾಸಕ ಆರ್.ಶಂಕರ್ ಅನರ್ಹ -ಸ್ಪೀಕರ್ ರಮೇಶ್ ಕುಮಾರ್
ಬೆಂಗಳೂರು : 2023ರ ಚುನಾವಣೆವರೆಗೆ ರಾಣೇಬೆನ್ನೂರು ಕ್ಷೇತ್ರದ ಶಾಸಕ ಆರ್.ಶಂಕರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ತುರ್ತು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೆಪಿಜೆಪಿ ಇಂದ ಗೆದ್ದಿದ್ದ ಆರ್.ಶಂಕರ್ ಬಳಿಕ ಕಾಂಗ್ರೆಸ್ ಸದಸ್ಯರಾಗುವುದಾಗಿ ತಿಳಿಸಿದ್ದರು. ಸರ್ಕಾರದಲ್ಲಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಆದರೆ, ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆ ವೇಳೆ ಬಿಜೆಪಿ ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಪಕ್ಷಾಂತರ ಕಾಯ್ದೆ ಅನ್ವಯ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ಧರಾಮಯ್ಯ ದೂರು ನೀಡಿದ್ದರು. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಂಡಿರುವುದಾಗಿ ಸ್ಪೀಕರ್ ರಮೇಶ ಕುಮಾರ್ ತಿಳಿಸಿದ್ದಾರೆ.