ಪ್ರಮುಖ ಸುದ್ದಿ
ಕಲಬುರಗಿ: ಲಾರಿಗೆ ಕಾರು ಡಿಕ್ಕಿ, ಇಬ್ಬರು ಸಾವು, ನಾಲ್ವರಿಗೆ ಗಂಭೀರ ಗಾಯ
ಕಲಬುರಗಿ: ಆಳಂದ ತಾಲೂಕಿನ ಮಾದನಹಿಪ್ಪರಗಾ ಸಮೀಪ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರನ್ನು ಮಹಾರಾಷ್ಟ್ರ ಮೂಲದ ಮೋಹಿಬ್ ಮತ್ತು ಸಮಿ ಎಂದು ಗುರುತಿಸಲಾಗಿದೆ.
ಗೆಳೆಯನ ಮದುವೆಗೆಂದು ಕಲಬುರಗಿಗೆ ಬಂದಿದ್ದರು. ಮದುವೆ ಬಳಿಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಹಿಂದಿರುಗುವ ಸಂದರ್ಭದಲ್ಲಿ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು ಮಾದನಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ನಿಖರವಾದ ಕಾರಣ ಏನೆಂಬುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.